ಧಾರವಾಡ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ ನಾಲ್ವರು ಮಕ್ಕಳು ಸೇರಿ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಇಸ್ಮಾಯಿಲ್ ಎಂಬುವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಇಸ್ಮಾಯಿಲ್ ಪತ್ನಿ ಹಾಗೂ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರರಕಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

