ಬೆಂಗಳೂರು: ಮನೆಯಲ್ಲಿ ಬೆಂಕಿಹೊತ್ತಿಕೊಂಡ ಪರಿಣಾಮ ಉಸಿರುಗಟ್ಟಿಸಾಫ್ಟವೇರ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ನಡೆದಿದೆ.
ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ ಕೆಲಸ ಮಾಡುತ್ತಿದ್ದ ಶರ್ಮಿಳಾ(34) ಮೃಥಪಟ್ಟಿದ್ದಾರೆ. ಜ.3 ರಂದು ರಾತ್ರಿ ಶರ್ಮಿಳಾ ವಾಸವಿದ್ದ ಮನೆಯಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಮನೆ ಮಾಲೀಕರಾದ ವಿಜಯೇಂದ್ರ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತಕ್ಷಣವೇ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮನೆಯ ಡೋರ್ ಒಡೆದು ಒಳಗೆ ನುಗ್ಗಿದ್ದರು. ಈ ವೇಳೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು. ಹೊಗೆಯಲ್ಲಿ ಉಸಿರುಗಟ್ಟಿ, ಶರ್ಮಿಳಾ ಪ್ರಜ್ಞೆತಪ್ಪಿದ್ದರು.
ಬೆಡ್ ಶೀಟ್, ಸೋಫಾ ಮತ್ತು ಕರ್ಟನ್ಗಳಿಗೆ ಹೊತ್ತಿಕೊಂಡ ಬೆಂಕಿಯ ಹೊಗೆಯಿಂದ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

