ಬೆಂಗಳೂರು: ಸ್ವಿಫ್ಟ್ ಕಾರು ಮತ್ತು ಬುಲೇರೋ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಗಗನ್ ಮತ್ತು ಆದರ್ಶ್ ಮೃತ ದುರ್ದೈವಿಗಳು. ಮೂವರು ಯುವಕರು ಎಲೆಕ್ಟಾçನಿಕ್ ಸಿಟಿಗೆ ತೆರಳಲು ನೈಸ್ ರಸ್ತೆ ಮೂಲಕ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಕಾರಿನ ಮುಂದಿನ ಸೀಟಲ್ಲಿ ಕುಳಿತಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶವಗಳನ್ನು ನೆಲಮಂಗಲ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಬೊಲೆರೋ ವಾಹನದ ಚಾಲಕನಿಗೂ ಕೂಡ ಗಾಯಗಳಾಗಿದ್ದು, ಆತನನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

