ಬೆಂಗಳೂರು: ಯುವಕನೊಬ್ಬನ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ.
ತೇಜಸ್ವಿನಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎನ್ನಲಾಗಿದೆ. ಈ ಸಂಬAಧ ತೇಜಸ್ವಿನಿ ಪೋಷಕರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ನೆಲಮಂಗಲ ಶವಾಗಾರಕ್ಕೆ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ. ಶವಪರೀಕ್ಷೆಯ ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

