ಸುದ್ದಿ

ಸಚಿವೆ ಹೆಬ್ಬಾಳಕರ ಮಗನ ಕಾರು ಚಾಲಕನಿಗೆ ಚಾಕು ಇರಿತ

Share It

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಅವರ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿಯಲಾಗಿದೆ. ಘಟನೆ ಬೆನ್ನಿಗೆ ಚಾಕು ಇರಿದವರು ಪರಾರಿಯಾದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಕ್ಲಬ್ ರಸ್ತೆಯಲ್ಲಿ ನಡೆದಿದೆ.

ಕಾರು ಚಾಲಕ ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಎಂಬವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಕೂಡಲೇ ಗಾಯಾಳು ಬಸವಂತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆಗೆ ಗಾಯಗಳಾಗಿವೆ.

ಮೃಣಾಲ್ ಅವರ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವಂತನಿಗೆ ಯಾವ ಕಾರಣಕ್ಕೆ ಚಾಕು ಹಾಕಲಾಗಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಖಾಸಗಿ ಆಸ್ಪತ್ರೆಗೆ ಮೃಣಾಲ್ ಹೆಬ್ಬಾಳಕರ ಆಗಮಿಸಿದ್ದಾರೆ. ಬೈಕ್ ಮೇಲೆ ಬಂದಿದ್ದ ಇಬ್ಬರು ಚಾಕು ಇರಿದು ಪರಾರಿಯಾಗಿದ್ದಾರೆ.

ಕ್ಲಬ್ ರಸ್ತೆಯ ಬಿ. ಶಂಕರಾನಂದ ಅವರ ಮನೆ ಎದುರಿನ ಸ್ಥಳದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Share It

You cannot copy content of this page