ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, ಮೋನಪ್ಪ ಪಾಟೀಲ, ಸಂಪತ್ ಕಡೋಲ್ಕರ್ ಬಂಧಿತರು. ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕ ಬಸವಂತ್ ಎಂಬುವವರಿಗೆ ಬೆಳಗಾವಿ ಕ್ಲಬ್ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಬಸವಂತ್ ಕುಮಾರ್ ಸ್ನೇಹಿತ ಮದನ್ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು.

