ಸುದ್ದಿ

ಬಾಯ್ಲರ್ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಕಾರ್ಮಿಕ ಸಾವು

Share It

ಬೆಳಗಾವಿ : ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ.

ಮೃತ ಕಾರ್ಮಿಕನನ್ನು ಅಥಣಿಯ ಮಂಜುನಾಥ್ ತೇರದಾಳ ಎಂದು ಹೇಳಲಾಗಿದೆ. ಮರಕುಂಬಿಯ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದರು.

ಗಾಯಗೊಂಡಿದ್ದ ಅನೇಕ ಕಾರ್ಮಿಕರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅದರಲ್ಲಿ ಮಂಜುನಾಥ್ ಸ್ಥಿತಿ ಗಂಭೀರವಾಗಿತ್ತು. ಇಂದು ಆತ ಮೃಥಪಟ್ಟಿದ್ದು, ಆಸ್ಪತ್ರೆಯ ಬಳಿ ಕುಟುಂಭಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


Share It

You cannot copy content of this page