ರಾಜಕೀಯ ಸುದ್ದಿ

ಮುಖ್ಯಮಂತ್ರಿಯವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್ !

Share It

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.

ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು.

ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page