ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ.
ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ, ನ್ಯಾಯಾಲಯ ಜಾಮೀನು ರದ್ದುಗೊಳಿಸಿ, ವಶಕ್ಕೆ ಪಡೆದು ತನಿಖೆ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ನಿಂದನೆ ಪ್ರಕರಣದಲ್ಲಿ ಒಮ್ಮೆ ಮುನಿರತ್ನ ಅವರ ಧ್ವನಿ ಮಾದರಿ ಸಂಗ್ರಹಿಸಿದ್ದ ಪೊಲೀಸರು, ಲಂಚ ಬೇಡಿಕೆ ಕೇಸ್‌ನಲ್ಲಿ ಧ್ವನಿ ಮಾದರಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದರು. ಆದರೆ, ಮುನಿರತ್ನ ಧ್ವನಿ ಮಾದರಿ ಸಂಗ್ರಹಕ್ಕೆ ಅವಕಾಶ ನೀಡಿಯೇ ಇಲ್ಲ ಎನ್ನಲಾಗಿದೆ.
ಪ್ರಕರಣದ ತನಿಖೆ ರದ್ದು ಕೋರಿ ಮುನಿರತ್ನ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯಗಳ ಅವರ ಮನವಿ ತಿರಸ್ಕಾರ ಮಾಡಿದ್ದು, ಅನಂತರವೂ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂಬುದು ಸಿಐಡಿ ವಾದವಾಗಿದೆ.

