ಅಪರಾಧ ಸುದ್ದಿ

ಕಾಲೇಜು ಆಡಳಿತ ಮಂಡಳಿಯ ಕಿರುಕುಳ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

Share It

ಬೆಂಗಳೂರು: ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ನಡೆದಿದೆ.

ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜಿನಲ್ಲಿ ಡೆಂಟಲ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಯಶಸ್ವಿನಿ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ನೀಡಿದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.

ಯಶಸ್ವಿನಿ ಒಂದು ದಿನ ಕಣ್ಣು ನೋವು ಎಂದು ರಜೆ ಹಾಕಿದ್ದಳು. ಇದನ್ನು ಪ್ರಶ್ನಿಸಿದ್ದ ಆಡಳಿತ ಂಡಳಿ ಕೆಟ್ಟದಾಗಿ ಪ್ರಶ್ನೆಗಳನ್ನು ಮಾಡಿತ್ತು. ಜತೆಗೆ, ಸೆಮಿನಾರ್‌ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ, ಯಶಸ್ವಿನಿಗೆ ಅವಕಾಶ ನೀಡದೆ ಅವಮಾನ ಮಾಡಿತ್ತು ಎನ್ನಲಾಗಿದೆ.

ಈ ಅವಮಾನದಿಂದ ಬೇಸತ್ತ ವಿದ್ಯಾರ್ಥಿನಿ ಯಶಸ್ವಿನಿ ತನ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆಡಳಿತ ಮಂಡಳಿ ವಿರುದ್ಧ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


Share It

You cannot copy content of this page