ಬೆಂಗಳೂರು: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ರಆಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ಆ ಮೂಲಕ ಒಳಮೀಸಲಾತಿ ಮರೀಚಿಕೆಯೇ ಆಗಿದೆ.
ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಉಭಯ ಸದನಗಳ ಒಪ್ಪಿಗೆ ಪಡೆದಿದ್ದ ಸರಕಾರ ನಂತರ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿತ್ತು. ಇದೀಗ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ವಿಧೇಯಕವನ್ನು ವಾಪಸ್ ಕಳುಹಿಸುತ್ತಿರುವುದಾಗಿ ತಿಳಿಸಿದ್ದಾರೆ.
ಉಳಿದಂತೆ ಚಾಮುಂಡೇಶ್ವರಿ ದೇವಸ್ಥಾನ ಪ್ರಾಧಿಕಾರ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ದ್ವೇಷ ಭಾಷಣ ವಿಧೇಯಕವನ್ನು ಪರಿಶೀಲನೆಗಾಗಿ ತಮ್ಮ ಬಳೀಯೇ ಇಟ್ಟುಕೊಂಡಿದ್ದು, ಉಳಿದ ವಿಧೇಯಕಗಳಿಗೆ ಅಂಗೀಕಾರ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ನಂತರ ಸರಕಾರ ೨೨ ವಿಧೇಯಕಗಳನ್ನು ರಾಜ್ಯಪಾಲರ ಅಂಕಿತಕ್ಕಾಗಿ ಕಳುಹಿಸಿಕೊಟ್ಟಿತ್ತು. ಇದರಲ್ಲಿ ೧೯ ವಿಧೇಯಕಗಳಿಗೆ ರಾಜ್ಯಪಾಲರು ಅಂಖಿತ ಹಾಕಿದ್ದು, ಎರಡು ವಿಧೇಯಕಗಳನ್ನು ವಾಪಸ್ ಮಾಡಿದ್ದಾರೆ. ದ್ವೇಷ ಭಾಷಣ ವಿಧೇಯಕವನ್ನು ಪರಿಶೀಲನೆಗಾಗಿ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

