ಅಪರಾಧ ಸುದ್ದಿ

ಗ್ಯಾಸ್ ಸೋರಿಕೆಯಿಂದ ಅಗ್ನಿಅವಘಡ: ಐವರು ಕಾರ್ಮಿಕರಿಗೆ ಗಂಭೀರ ಗಾಯ

Share It

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಿಂದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಹಾರ ಮೂಲದ ಅಂಶುರಾಜ್ ಕುಮಾರ್ (೧೮), ಹುಸೇನ್ ಖಾನ್ (೨೧), ರೋಹಿತ್ ಚೌದರಿ (೨೦), ಆರಬೇಗ್ ಆಲಂ (೨೬) ಹಾಗೂ ಮುಜಾಫರ್ ಹುಸೇನ್ (೧೯) ಎಂಬ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಐವರೂ ಚೊಕ್ಕಸಂದ್ರದಲ್ಲಿ ಒಂದೇ ರೂಮ್‌ನಲ್ಲಿ ವಾಸವಿದ್ದು, ಬೇರೆಬೇರೆ ಕಡೆ ಕೆಲಸಕ್ಕೆ ಹೋಗುತ್ತಿದ್ದರು. ರೂಮ್‌ನಲ್ಲಿದ್ದ ಸಿಲಿಂಡರ್‌ನಿAದ ಅಡುಗೆ ಅನಿಲ ಸೋರಿಕೆ ಆಗಿರುವುದನ್ನು ಅರಿಯದೆ ಶುಕ್ರವಾರ ಬೆಳಿಗ್ಗೆ ಟೀ ಕಾಯಿಸಲು ಲೈಟರ್ ಹೊತ್ತಿಸಿದಾಗ ಅಗ್ನಿ ಅವಘಡ ಸಂಭವಿಸಿದೆ.

ಗಾಯಾಳುಗಳನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page