ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಪಾಲಿಕೆ ಸದಸ್ಯರೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊAಡಿರುವ ಘಟನೆ ದಾವಣಗೆರೆ ಸಮೀಪ ನಡೆದಿದೆ.
ದಾವಣಗೆರೆಯ ನಾಗನೂರು ಬಳಿಯ ತಮ್ಮ ತೋಟದ ಮನೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೌಟುAಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದರು. ಅವರನ್ನು ರಕ್ಷಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯಿಂದ ಮನನೊಂದ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ತಮ್ಮ ತೋಟದ ಮನೆಯಲ್ಲಿ ಕಾರು ನಿಲ್ಲಿಸಿಕೊಂಡು, ಕಾರಿಗೆ ಮತ್ತು ತಮ್ಮ ಮೈಮೇಲೆ ಪೆಟ್ರೋಲ್ ಸರಿದುಕೊಂಡು ಬೆಂಕಿಹಚ್ಚಿಕೊAಡಿದ್ದಾರೆ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದಿಂದ ಚಂದ್ರಶೇಖರ್ ಸಾವನ್ನಪ್ಪಿದ್ದರೆ, ಮಕ್ಕಳಿಬ್ಬರು ಆಸ್ಪತ್ರೆ ಪಾಲಾಗಿದ್ದಾರೆ.

