ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಶೀತಗಾಳಿ ಮುನ್ಸೂಚನೆ

Share It

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಮೂರರಿಂದ ಆರು ಸೆಲ್ಸಿಯಸ್‌ನಷ್ಟು ಕುಸಿಯಲಿದೆ, ಹಲವೆಡೆ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ. ಬಂಗಾಳಕೊಲ್ಲಿಯ ನೈರುತ್ಯ ಹಾಗೂ ಶ್ರೀಲಂಕಾದ ಈಶಾನ್ಯ ಕರಾವಳಿಯಲ್ಲಿ ಶನಿವಾರ ವಾಯುಭಾರ ಕುಸಿತ ಉಂಟಾಗಿದ್ದು, ಉತ್ತರ ವಾಯವ್ಯ ದಿಕ್ಕಿಗೆ ಮಾರುತಗಳು ಚಲಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರಿಂದ ಕರ್ನಾಟಕದ ಮಳೆ ಮಾದರಿಯ ಮೇಲೆ ಪರಿಣಾಮವಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದೂ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗಬಹುದು. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಕಂಡುಬರಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಗಿದೆ.


Share It

You May Have Missed

You cannot copy content of this page