ಬೆಂಗಳೂರು: ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಜಿಬಿಎ ಚುನಾವಣೆಯಲ್ಲಿ ಅದೇ ಂಆದರಿಯ ಗೆಲುವು ಪಡೆಯುವ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದಾರೆ.
ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ೧೩೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿ ಪಾಲಾಗಿದೆ. ಇದು ಕರ್ನಾಟಕದ ಬಿಜೆಪಿ ನಾಯಕರ ಹುಮ್ಮಸ್ಸು ಹೆಚ್ಚಿಸಿದ್ದು, ಬೆಂಗಳೂರು ಪಾಲಿಕೆ ಚುನಾವಣೆ ಗೆಲುವು ನಮ್ಮದೇ ಎಂದು ಬೀಗುತ್ತಿದ್ದಾರೆ.
ಫಲಿತಾಂಶದ ಕುರಿತು ಆರ್.ಅಶೋಕ್ ಮಾತನಾಡಿ, ಮಹಾರಾಷ್ಟçದ ಪ್ರತಿಷ್ಠಿತ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಅದೇ ರೀತಿಯಲ್ಲಿ ಬೆಂಗಳೂರಿನಲ್ಲಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಈ ಕುರಿತು ಟ್ವೀಟ್ ಮಾಡಿ, ಪ್ರಬುದ್ಧ ಮತದಾರರು ಎಂದಿಗೂ ಬಿಜೆಪಿ ಕೈಬಿಡುವುದಿಲ್ಲ. ಮುಂಬೈ ಮಾದರಿಯಲ್ಲಿ ರಾಜ್ಯದ ಜಿಬಿಎ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ಕಚೇರಿಗಳಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸಲಾಗಿದೆ.

