ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ 10 ಲಕ್ಷ ರು. ಪರಿಹಾರ ನೀಡಿದ್ದಾರೆ.
ಜನಾರ್ದನ ರೆಡ್ಡಿ ಮತ್ತು ಬಿಜೆಪಿ ನಾಯಕರು ರಾಜಶೇಖರ ಪತ್ನಿ ಲಕ್ಷ್ಮೀ ಅವರ ಹೆಸರಿನಲ್ಲಿ 10 ಲಕ್ಷ ರು. ಪರಿಹಾರದ ಚೆಕ್ ನೀಡಿದ್ದು, ಬಿಜೆಪಿ ನಾಯಕರೆಲ್ಲ ಇಂದು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಿಜೆಪಿ ಘಟನೆಗೆ ಸಂಬಂಧಪಟ್ಟವರನ್ನು ಬಂಧಿಸದ ಸರಕಾರದ ಕ್ರಮದ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸುತ್ತಿರುವ ಹೊತ್ತಿನಲ್ಲಿ ಪರಿಹಾರದ ಮೊತ್ತ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜಶೇಖರ್ ನಿವಾಸಕ್ಕೆ ತೆರಳಿ, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿತ್ತು. ಇದೀಗ ಜನಾರ್ದನ ರೆಡ್ಡಿ ಪತ್ನಿ ಹೆಸರಿನಲ್ಲಿ ಮೃತರ ಕುಟುಂಬಕ್ಕೆ ಪರಿಹಾರದ ಮೊತ್ತ ನೀಡಲಾಗಿದೆ.

