ಬೆAಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಂದ ಸಂದೇಶವೊಂದರಲ್ಲಿ ವಿಮಾನ ನಿಲ್ದಾಣವನ್ನು ಆರ್‌ಡಿಎಕ್ಸ್, ಐಇಡಿ ಬಳಸಿ ಸ್ಪೋಟಗೊಳಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಇದರಿಂದ ಆತಂಕಗೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಏರ್‌ಪೋರ್ಟ್ ಸಂಪೂರ್ಣ ಪರಿಶೀಲನೆ ನಡೆಸಿ, ಅಲ್ಲಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹೀಗಾಗಿ, ಅಧಿಕಾರಿಗಳು ಹುಸಿ ಬಾಂಬ್ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

