ಬೆಂಗಳೂರು:ಕೋಲಾರದ ಬಳಿ ಬೆಳಗ್ಗಿನ ಜಾವ ನಡೆದ ಅಪಘಾತದಲ್ಲಿ ಕ್ವಾಲೀಸ್ ಕಾರು ಅಪಘಾತದಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿದ ಟಯೋಟಾ ಕ್ವಾಲೀಸ್ ಕಾರು ಮರಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಒಂದೇ ಕುಟುಂಭದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

