ಸಿನಿಮಾ ಸುದ್ದಿ

ಬಿಗ್ ಬಾಸ್ ಗೆದ್ದ ಗಿಲ್ಲಿ ನಟನನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Share It

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಮಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ನಟರಾಜ್) ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page