ಚಿಕ್ಕಬಳ್ಳಾಪುರ: ದೇವರ ಉತ್ಸವ ಮೂರ್ತಿಯನ್ನು ಹೊರಲು ದಲಿತರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಜಿಲ್ಲೆಯ ಎ. ಕೊತ್ತೂರಿನಲ್ಲಿ ಗ್ರಾಮದೇವತೆಯ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ದಲಿತರು ಉತ್ಸವ ಮೂರ್ತಿಯ ಮೆರವಣಿಗೆ ವೇಳೆ, ಮೂರ್ತಿಯನ್ನು ಹೊರಲು ಕೆಲವು ದಲಿತ ಯುವಕರು ಮುಂದಾದರು. ಇದಕ್ಕೆ ಸವರ್ಣೀಯರು ಅಡ್ಡಿಪಡಿಸಿದರು. ಆಗ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ ಎನ್ನಲಾಗಿದೆ.
ದಲಿತರು ಮತ್ತು ಸವರ್ಣಿಯರ ನಡುವಿನ ಗಲಾಟೆಯಿಂದ ಗ್ರಾಮದೇವತೆ ಮೆರವಣಿಗೆ ಅರ್ಧಕ್ಕೆ ನಿಂತಿದ್ದು, ನಡುಬೀದಿಯಲ್ಲಿಯೇ ವಿಗ್ರಹವನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬAಧ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಗ್ರಾಮಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.

