ಹುಬ್ಬಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದಿದೆ.
ಬೈರಿದೇವರಕೊಪ್ಪದ ಸನಾ ಕಾಲೇಜ್‌ನ ಹಾಸ್ಟೆಲ್ ಮೂರನೇ ಮಹಡಿಯಲ್ಲಿದ್ದ ರೂಮ್‌ನಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಮೃತ ವಿದ್ಯಾರ್ಥಿಯನ್ನು ಅಯಾನ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.
Updating…

