ಅಪರಾಧ ಸುದ್ದಿ

ಶಿವಮೊಗ್ಗ: ಭದ್ರಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ !

Share It

ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಪ್ರಕರಣ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ನಡೆದಿದೆ.

ಪರುಶುರಾಮ, ಪತ್ನಿ ಶ್ವೇತಾ ಹಾಗೂ ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ನಾಲ್ವರು ಮನೆಯಲ್ಲಿ ಮಕ್ಕಳನ್ನು ಬಿಟ್ಟು, ಬಟ್ಟೆ ತೊಳೆಯಲು ನದಿಗೆ ಹೋಗಿದ್ದರು ಎನ್ನಲಾಗಿದೆ. ಪರುಶುರಾಮ ಅವರ ಮಕ್ಕಳು ಮನೆಯಲ್ಲಿಯೇ ಇದ್ದು, ಅವರನ್ನು ಚಿಕ್ಕಮ್ಮನ ಬಳಿ ಬಿಡಲಾಗಿತ್ತು. ಈಗ ಆ ಮಕ್ಕಳು ಅನಾಥರಾಗಿದ್ದಾರೆ.

ಕ್ಯಾಂಪ್ ಬಳಿಯ ನದಿಯಲ್ಲಿ ಇದೀಗ ಶೋಧ ಕಾರ್ಯ ನಡೆಯುತ್ತಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.


Share It

You cannot copy content of this page