ದಾವಣಗೆರೆ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದು ನಿಜ. ಆದರೆ, ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಲವರು ಮೈಕ್ ಸಿಕ್ಕಿದ ತಕ್ಷಣ ಏನೇನೋ ಮಾತಾಡಿ ಬಿಡ್ತಾರೆ. ಇದರಿಂದ ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವುದು ನಿಜ, ಇದನ್ನು ನಾನು ಇಲ್ಲ ಎಂದು ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.
ಆದರೆ, ಸಿಎಂ ಬದಲಾವಣೆ ವಿಚಾರದಲ್ಲಿ ಯಾರೋ ಏನೋ ಮಾತನಾಡಿದರು ಎಂದು ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಸಿಎಂ ಬದಲಾವಣೆಯ ತೀರ್ಮಾನ ಹೈಕಮಾಂಡ್ಗೆ ಬಿಟ್ಟಿದ್ದು, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದರು.

