ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಪ್ರಾಣತ್ಯಾಗ

Share It

ಬೆಳಗಾವಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲದ ಒತ್ತಡ ಮತ್ತು ನಿರಂತರ ಕಿರುಕುಳಕ್ಕೆ ಮನನೊಂದು ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಗೌರವ್ವ ನೀಲಪ್ಪ ಕೆಂಗಾನೂರ (36). ಆತ್ಮಹತ್ಯೆಗೆ ಮುನ್ನ ಅವರು ಮನೆಯ ಗೋಡೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾಗಿ ತಿಳಿದುಬಂದಿದೆ. ಸುಮಾರು ₹7 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದ ಗೌರವ್ವ, ಸಾಲ ವಸೂಲಿಗೆ ನಡೆಯುತ್ತಿದ್ದ ಒತ್ತಡದಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಡೆತ್ ನೋಟ್‌ನಲ್ಲಿ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಕುಟುಂಬದವರಿಗೆ ಮನವಿ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page