ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಏಕಾಏಕಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತುಮಕೂರು ನಗರದಲ್ಲಿ ನಡೆದಿರುವ ಘಟನೆಯಲ್ಲಿ ತಿಮ್ಮೇಗೌಡ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಷ್ಟಿçÃಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಗೆ ಡಿವೈಡರ್ ಮೇಲೆ ನಿಂತಿದ್ದ ತಿಮ್ಮೇಗೌಡ ಏಕಾಏಕಿ ಅಡ್ಡಬಿದ್ದಿದ್ದಾನೆ. ಆಗ ಬಸ್ ಆತನ ಮೇಲೆ ಹರಿದಿದೆ.
ಬಸ್ ವೇಗವಾಗಿ ಚಲಿಸುತ್ತಿದ್ದ ಕಾರಣ ನಾಲ್ಕು ಚಕ್ರಗಳು ಆತನ ಮೇಲೆ ಹರಿದಿವೆ. ಹೀಗಾಗಿ, ತಿಮ್ಮೇಗೌಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬಸ್ ಚಕ್ರಕ್ಕೆ ತಿಮ್ಮೇಗೌಡ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸಿದ್ದು, ಆತನ ಕುಟುಂಬದಲ್ಲಿದ್ದ ಕಲಹದ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿದೆ.

