ತುಮಕೂರು: ನಿಂತಿದ್ದ ಕಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಮರಣವೊಂದಿರುವ ಘಟನೆ ತುಮಕೂರು ಬಳಿಯ ನಂದಿಹಾಳ್ ಬಳಿಯಲ್ಲಿ ನಡೆದಿದೆ.
ಗೋಕರ್ಣಕ್ಕೆ ಬೆಂಗಳೂರಿನಿಂದ ತೆರಳಿದ್ದ ಮೂವರು ವಾಪಸಾಗುತ್ತಿದ್ದರು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳಕ್ಕೆ ಆಗಮಿಸಿದ ಅಂಬ್ಯುಲೆನ್ಸ್ ಮೂಲಕ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

