ಸುದ್ದಿ

KSRTC ಕೇಂದ್ರ ಕಚೇರಿಯಲ್ಲಿ ಅದ್ದೂರಿಯ ಗಣರಾಜ್ಯೋತ್ಸವ ಆಚರಣೆ

Share It

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಡಾ. ನಂದಿನಿದೇವಿ ಕೆ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.

ಗಣರಾಜ್ಯೋತ್ಸವ ದಿನವು ನ್ಯಾಯ, ಸಮಾನತೆ ಮತ್ತು ಹಿರಿಮೆಯನ್ನು ನೀಡಿದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ ಜತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು.

ನಮ್ಮ ಸಾರಿಗೆ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡ್ಯೊಯುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಕರ್ತವ್ಯವನ್ನು  ಶ್ರದ್ಧಾಪೂರ್ವಕವಾಗಿ ನಿರ್ವಹಿಸಬೇಕು ಎಂದು ಕರೆ‌ ನೀಡಿದರು. ಕಾರ್ಯಕ್ರಮದಲ್ಲಿ, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.


Share It

You cannot copy content of this page