ಅಪರಾಧ ರಾಜಕೀಯ ಸುದ್ದಿ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ : ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧನ

Share It

ಬೆAಗಳೂರು: ಶಿಡ್ಲಘಟ್ಟದ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ ಹಾಕಿದ್ದರು. ಈ ಸಂಬAಧ ಅಧಿಕಾರಿ ಅಮೃತಾ ಗೌಡ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಹುಡುಕುತ್ತಿದ್ದು, ತಲೆ ಮರೆಸಿಕೊಂಡಿದ್ದರು.

ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಸಿಗದೆ ಹಿನ್ನೆಲೆಯಲ್ಲಿ ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ರಾಜೀವ್ ಗೌಡ ತಲೆಮರೆಸಿಕೊಳ್ಳುವಲ್ಲಿ ಕಾಂಗ್ರೆಸ್‌ನ ಪ್ರಭಾವಿಗಳು ಸಹಾಯ ಮಾಡುತ್ತಿರುವ ಅನುಮಾನ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಕೇರಳಕ್ಕೆ ರೈಲಿನ ಮೂಲಕ ಹೊರಟಿದ್ದ ರಾಜೀವ್ ಗೌಡನನ್ನು ಪೊಲೀಸರು ಗಡಿಯಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತರುತ್ತಿದ್ದಾರೆ. ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸುವ ಸಾಧ್ಯತೆಯಿದೆ.


Share It

You cannot copy content of this page