ಬೆಂಗಳೂರು: ಮಹಿಳಾ ಅಧಿಕಾರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಸಂಬಂಧ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸಿದ್ದರು. ಇಂದು ಅವರನ್ನು ಶಿಡ್ಲಘಟ್ಟದ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದು, ಅವರನ್ನು ಜೈಲಿಗೆ ಶಿಫ್ಟ್ ಮಾಡಲು ಆದೇಶಿಸಿದೆ. ಮಹಿಳಾ ಅಧಿಕಾರಿಗೆ ನಿಂದನೆ ಮಾಡಿದ ಆರೋಪದಲ್ಲಿ ರಾಜೀವ್ ಗೌಡ ಕಳೆದ ೧೩ ದಿನಗಳಿಂದ ತಲೆಮರೆಸಿಕೊಂಡಿದ್ದರು.

