ಬೆಂಗಳೂರು: ಮನೆಗೆಲಸಕ್ಕೆ ಸೇರಿದ ದಂಪತಿಗಳು ಕೇವಲ 20 ದಿನಗಳಲ್ಲೇ 18 ಕೋಟಿ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.
20 ದಿನಗಳ ಹಿಂದಷ್ಟೇ ದಿನೇಶ್ ಮತ್ತು ಕಮಲಾ ಎಂಬ ದಂಪತಿಗಳು ಯಮಲೂರಿನ ಬಿಲ್ಡರ್ ಶಿವಕುಮಾರ್ ಎಂಬುವವರ ಮನೆಗೆ ಕೆಲಸಕ್ಕೆಂದು ಸೇರಿಕೊಂಡಿದ್ದರು. ಜ.25ರಂದು ಶಿವಕುಮಾರ್ ಕುಟುಂಬಸ್ಥರು ಮನೆಯಲ್ಲಿ ಇಲ್ಲದ ವೇಳೆಯಲ್ಲಿ 18 ಕೋಟಿ ಕಳ್ಳತನ ಮಾಡಿ ದಂಪತಿಗಳಿಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬAಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳು, ಮನೆಯಲ್ಲಿ ಯಾರೂ ಇಲ್ಲದನ್ನು ನೋಡಿಕೊಂಡಿ ನೆಲಮಹಡಿ ಮತ್ತು ಮೊದಲ ಮಹಡಿಯ ಲಾಕರ್ ಓಪನ್ ಮಾಡಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.
ಮನೆಯಲ್ಲಿಟ್ಟಿದ್ದ11.5 ಕೆಜಿ ಚಿನ್ನ, 5 ಕೆ.ಜಿ ಬೆಳ್ಳಿ, 11.5 ಲಕ್ಷ ನಗದು ಕಳ್ಳತನ ಮಾಡಲಾಗಿದೆ ಎಂದು ಶಿವಕುಮಾರ್ ದೂರು ನೀಡಿದ್ದಾರೆ. ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

