ಅಪರಾಧ ಸುದ್ದಿ

ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: 36 ಪ್ರಯಾಣಿಕರು ಪಾರು

Share It

ಶಿವಮೊಗ್ಗ: ನಗರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸೂಡೂರು ಗ್ರಾಮದ ಬಳಿ ನಡೆದಿದೆ.

ಹೊಸನಗರ ತಾಲೂಕು ಅರಸಾಳು ಬಳಿಯ 9 ನೇ ಮೈಲಿಗಲ್ಲಿನ ಬಳಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್‌ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅನ್ನಪೂರ್ಣ ಹೆಸರಿನ ಖಾಸಗಿ ಬಸ್ ಹೊಸನಗರ ತಾಲೂಕು ನಗರದಿಂದ ಬೆಂಗಳೂರಿಗೆ ಬಸ್ ಪ್ರಯಾಣ ಬೆಳೆಸಿತ್ತು. ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು ಗ್ರಾಮ ದಾಟಿ 9 ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್‌ಗೆ ಬೆಂಕಿ ತಗುಲಿದೆ.

ಗಾಬರಿಯಾದ ಬಸ್ ಚಾಲಕ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ. ಬಸ್ ಪ್ರಯಾಣ ಆರಂಭಿಸಿ ಕೇವಲ 30 ನಿಮಿಷವಾಗಿದೆ. ಅಲ್ಲದೆ ಪ್ರಯಾಣಿಕರು ಇನ್ನೂ ನಿದ್ದೆ ಮಾಡದ ಕಾರಣ ಬಸ್‌ಗೆ ಬೆಂಕಿ ಬೀಳುತ್ತಿದ್ದಂತೆ ಬಸ್‌ನಿಂದ ಎಲ್ಲರೂ ಇಳಿದು ಬಚಾವ್ ಆಗಿದ್ದಾರೆ. ಬಸ್ ಮರಕ್ಕೆ ಡಿಕ್ಕಿ ಹೊಡೆಯದೆ ಮುಂದಕ್ಕೆ ಸಾಗಿದ್ದರೆ ಸಾಕಷ್ಟು ಅನಾಹುತ ಸಂಭಿಸುವ ಸಾಧ್ಯತೆ ಇತ್ತು. ಬಸ್‌ಗೆ ಹೇಗೆ ಬೆಂಕಿ ಬಿದ್ದಿದೆ ಅನ್ನೋದರ ಬಗ್ಗೆ ತಿಳಿದುಬಂದಿಲ್ಲ.


Share It

You cannot copy content of this page