ತುಮಕೂರು: ನೆಲಮಂಗಲ ತಾಲ್ಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ಹಲವು ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹನುಮಾನಾಯ್ಕ ಅವರಿಗೆ ತುಮಕೂರು ವಿಶ್ವ ವಿದ್ಯಾಲಯದ ಕನ್ನಡ ವಿಭಾಗದಿಂದ ಪಿಎಚ್.ಡಿ ಲಭಿಸಿದೆ.
ಪ್ರಾಧ್ಯಾಪಕರಾದ ಡಾ. ಪಿ. ಎಂ. ಗಂಗಾಧರಯ್ಯ ಅವರ ಮಾರ್ಗದರ್ಶನದಲ್ಲಿ “ಕಾಮನ ಹಬ್ಬದ ಆಚರಣೆಗಳು, ಒಂದು ಸಾಂಸ್ಕೃತಿಕ ಅಧ್ಯಯನ” ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಡಾಕ್ಟರೇಟ್ ಪದವಿ ಲಭಿಸಿದೆ.
ಪಿ.ಹೆಚ್.ಡಿ ಪದವಿ ಪಡೆದ ಹನುಮಾನಾಯ್ಕ ಅವರಿಗೆ ಜಿಲ್ಲಾ ಉಪನಿರ್ದೇಶಕರು ಸೇರಿ ಇಲಾಖಾ ಮೇಲಾಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನೂರಾರು ಶಿಕ್ಷಕರು ಹಾಗೂ ಸಹೋದ್ಯೋಗಿ ಮಿತ್ರರು ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.

