ಬೆಂಗಳೂರು: ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆಗೆ ಪ್ರಚೋಧನೆ ನೀಡುವ ಜಾಹೀರಾತು ಅಳವಡಿಸಿದ್ದರೆ, ಕೂಡಲೇ ತೆರವುಗೊಳಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಮಾಡಿದ್ದಾರೆ.
ಈ ಕುರಿತು ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಪತ್ರ ಬರೆದಿರುವ ಸಚಿವರು, ಕೆಲ ಬಸ್‌ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆಯನ್ನು ಪ್ರಚೋಧಿಸುವ ಜಾಹೀರಾತುಗಳನ್ನು ಅಳವಡಿಸಿರುವುದು ಕಂಡು ಬಂದಿದೆ. ಇನ್ಮುಂದೆ ಅಂತಹಗಳನ್ನು ಅಳವಡಿಸದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಈಗಾಗಲೇ ಜಾಹೀರಾತುಗಳನ್ನು ಬಸ್ಸುಗಳ ಮೇಲೆ ಹಾಗೂ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಇನ್ಮುಂದೆ ಯಾವುದೇ ಕಾರಣಕ್ಕೂ ತಂಬಾಕು ಸೇವನೆ ಪ್ರಚೋಧಿಸುವ ಜಾಹೀರಾತುಗಳನ್ನು ಬಸ್ಸುಗಳ ಮೇಲೆ ಹಾಗೂ ಬಸ್ ನಿಲ್ದಾಣದಲ್ಲಿ ಅಳವಡಿಸಬಾರದು ಎಂದು ಸೂಚನೆ ನೀಡಿದ್ದಾರೆ.

