ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆದಿದ್ದು, ನಟಿ ಜಯಮಾಲಾ ಅವರು ಮುಂದಿನ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಫಿಲ್ಮ್ ಚೇಂಬರ್ ಪಕ್ಕದ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆಯಿತು. ಈ ಭಾರಿಯ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಜಯಮಾಲಾ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ 512 ಮತ ಪಡೆದು ಜಯಮಾಲಾ ಜಯ ಗಳಿಸಿದ್ದಾರೆ.
ಗೌರವ ಉಪಾಧ್ಯಕ್ಷರುಗಳಾಗಿ ಸುಂದರ್ ರಾಜು (ನಿರ್ಮಾಪಕರ ವಲಯ), ಕೆ.ಮಂಜು (ವಿತರಕ ವಲಯ) ಹಾಗೂ ಕಿಶೋರ್ (ಪ್ರದರ್ಶಕರ ವಲಯ) ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಗಳಾಗಿ ಎ.ಗಣೇಶ್ (ನಿರ್ಮಾಪಕ), ರಮೇಶ್ (ವಿತರಕ ವಲಯ), ಅಶೋಕ್ (ಪ್ರದರ್ಶಕರ ವಲಯ) ಗೆಲುವು ಸಾಧಿಸಿದ್ದಾರೆ. ಖಜಾಂಚಿಯಾಗಿ ಜಯಸಿಂಹ ಮುಸುರಿ ಆಯ್ಕೆಯಾಗಿದ್ದಾರೆ.

