ಮೈಸೂರು: ಜಮೀನಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ರೈತ ಕುಟುಂಬದ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಮಗು ಸೇರಿ ರೈತ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚುಂಚನಹಳ್ಳಿ ಗ್ರಾಮದ ರೈತ ನಂಜುAಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನ ಜತೆಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೇ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿವೆ. ಕೂಡಲೇ ಚಿರತೆ ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

