ರಾಯಚೂರು: ಇನ್ನೊಂದು ತಿಂಗಳಲ್ಲಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ತಿಂಥಣಿ ಗ್ರಾಮದ ಕಾಗಿನೆಲೆ ಪೀಠದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ರಾಮಯ್ಯ ಜಾತಿ ಗಣತಿ ಬಿಡುಗಡೆ ಕುರಿತು ಮಾತನ್ನಾಡಿದ್ದಾರೆ. ಈಗಾಗಲೇ ಜಾತಿಗಣತಿಯ ಸರ್ವೇ ಕಾರ್ಯ ಸಂಪೂರ್ಣವಾಗಿ ಮುಗಿದಿದೆ. ಇನ್ನೊಂದು ತಿಂಗಳಲ್ಲಿ ಅಂಗೀಕರಿಸಿ ಬಿಡುಗಡೆ ಮಾಡ್ತೇವೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಬಿಡುಗಡೆಯಾಗಿದ್ದ ಜಾತಿಗಣತಿಯಲ್ಲಿ ಲೋಪಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮರುಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಇದೀಗ ಆ ವರದಿ ರೆಡಿಯಾಗಿದ್ದು, ಇನ್ನೊಂದು ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಸುಳಿವನ್ನು ಸಿಎಂ ನೀಡುವ ಮೂಲಕ ಹಿಂದುಳಿದ ವರ್ಗಗಳ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.

