ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರಿ ಬೆಂಕಿ ಅನಾಹುತವಾಗಿದ್ದು, ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ದೊಡ್ಡ ಮಟ್ಟದಲ್ಲಿ ಹಬ್ಬಲು ಪ್ರಾರಂಭವಾಗಿದೆ. ದಕ್ಷಿಣ ಕನ್ನಡ – ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯಲ್ಲಿ ಬೆಂದು ಹೋಗುತ್ತಿದೆ.
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಮತ್ತೆ
ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದೆ.

