ನಳಂದ (ಬಿಹಾರ): ಅಂತಾರಾಷ್ಟ್ರೀಯ ಪ್ರವಾಸಿ ತಾಣವಾದ ರಾಜಗೀರ್‌ನ ದಿಗಂಬರ ಜೈನ ಧರ್ಮಶಾಲೆಯ ಕೊಠಡಿಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನಾಲ್ವರು ಪ್ರವಾಸಿಗರು ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಪ್ರವಾಸಿಗರು ಬೆಂಗಳೂರು ಮೂಲದವರು ಎಂದು ವರದಿಯಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿ, ಧರ್ಮಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್ ಮಾಡಿದ್ದಾರೆ.
ಬೆಂಗಳೂರು ಮೂಲದ ನಾಲ್ವರು ಪ್ರವಾಸಿಗರ ಶವ ಪತ್ತೆಯಾಗಿವೆ: ಧರ್ಮಶಾಲಾದ ರಿಜಿಸ್ಟರ್ ಪ್ರಕಾರ, ಬೆಂಗಳೂರಿನ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ನಾಲ್ವರು ಜ.31 ರಂದು ರೂಂ ಬುಕ್ ಮಾಡಿದ್ದರು. ಇವರು ಪಾವಾಪುರಿಗೆ ಭೇಟಿ ನೀಡಲು ಇಲ್ಲಿಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.
ಆದರೆ ಏಕಾಏಕಿ ರೂಂನಲ್ಲಿ ನಾಲ್ವರೂ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ಕಾರಣ ಗೊತ್ತಾಗಲಿದೆ. ಈ ಪ್ರಕರಣ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಘಟನೆಯನ್ನು ದೃಢಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪಾಟ್ನಾದ ಎಫ್‌ಎಸ್‌ಎಲ್ ತಂಡ ಆಗಮಿಸಿ ತನಿಖೆ ಕೈಗೊಂಡಿದೆ.
ಪ್ರಕರಣದ ಕುರಿತು ಸದ್ಯ ತನಿಖೆ ನಡೆಯುತ್ತಿದೆ. ಕೊಠಡಿಯಿಂದ ದುರ್ವಾಸನೆ ಬಂದಾಗ ಹತ್ತಿರ ನಿವಾಸಿಗಳು ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಆಗಮಿಸಿ ಕೊಠಡಿ ತೆರೆದು ನೋಡಿದಾಗ ನಾಲ್ವರು ಮೃತಪಟ್ಟಿರುವುದು ಗೊತ್ತಾಗಿದೆ. ಎರಡು ದಿನಗಳ ಹಿಂದೆ, ಈ ಪ್ರವಾಸಿಗರು ಮಾರುಕಟ್ಟೆಯಲ್ಲಿ ತಿರುಗಾಡುತ್ತಿರುವುದನ್ನು ಇಲ್ಲಿನ ಸ್ಥಳೀಯರು ಗಮನಿಸಿದ್ದರು ಎನ್ನಲಾಗಿದೆ.

