ಅಪರಾಧ ಸುದ್ದಿ

ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಭಾರಿ ಅಪಘಾತ: ಆರು ಜನರ ಸಾವು

Share It

ಬೆಂಗಳೂರು: ದೆಹಲಿಯ ಯಮುನಾ ಎಕ್ಸ್‌ ಪ್ರೆಸ್ ಹೈವೆಯಲ್ಲಿ ಭಾರಿ ಅಪಘಾತವೊಂದು ಸಂಭವಿಸಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮಥುರಾ ಬಳಿ ಯಮುನಾ ಎಕ್ಸ್‌ಪ್ರೆಸ್ ಹೈವೆಯಲ್ಲಿ ಖಾಸಗಿ ಬಸ್‌ನಿಂದ ಇಳಿದಿದ್ದ ಪ್ರಯಾಣಿಕರು, ಮೂತ್ರ ವಿಸರ್ಜನೆಗೆ ರಸ್ತೆ ಬದಿಯಲ್ಲಿ ನಿಂತಿದ್ದರು. ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಪ್ರಯಾಣಿಕರ ಮೇಲೆ ಹರಿದಿದೆ ಎನ್ನಲಾಗಿದೆ.

ಲಾರಿ ಹರಿದ ರಭಸಕ್ಕೆ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Share It

You cannot copy content of this page