ತಿರುಪತಿ: ಕಳೆದ ಸರಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಬಾತ್ ರೂಮ್ ಸ್ವಚ್ಛಗೊಳಿಸುವ ರಾಸಾಯನಿಕವನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸ್ಫೋಟಕ ಆರೋಪ ಮಾಡಿದ್ದಾರೆ.
ಕರ್ನೂಲ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರ ಸ್ನಾನಗೃಹ ಸ್ವಚ್ಛಗೊಳಿಸುವ ರಾಯಾಸನಿಕರಿಂದ ತಯಾರಿಸಿದ ತುಪ್ಪವನ್ನು ಲಡ್ಡು ತಯಾರಿಕೆಗೆ ಬಳಸುತ್ತಿತ್ತು. ಕಲಬೆರಕೆ ಪ್ರಸಾದವನ್ನು ನೀಡುವ ಮೂಲಕ ತಿರುಮಲದ ಪಾವಿತ್ರತೆಯನ್ನು ಕೆಡಿಸುವ ಪ್ರಯತ್ನ ನಡೆಸಲಾಗಿತ್ತು ಎಂದಿದ್ದಾರೆ.
ತಿರುಪತಿ ಮಾತ್ರವಲ್ಲದೇ, ಶ್ರೀಶೈಲದ ದೇವಸ್ಥಾನಕ್ಕೂ ಇಂತಹದ್ದೇ ಕಲಬೆರಕೆ ತುಪ್ಪವನ್ನು ಪೂರೈಕೆ ಮಾಡಲಾಗಿತ್ತು ಎಂದು ನಾಯ್ಡು ಆರೋಪಿಸಿದ್ದಾರೆ. ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪದಡಿ ಎಸ್ಐಟಿ ರಚನೆ ಮಾಡಿ ತನಿಖೆ ನಡೆಸಲಾಗಿತ್ತು. ಜತೆಗೆ ಪ್ರಕರಣವನ್ನು ಸಿಬಿಐ ತನಿಖೆಯನ್ನು ನಡೆಸಲಾಗಿತ್ತು.
ಸಿಬಿಐ ತನಿಖೆಯಲ್ಲಿ ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ ವಾದಿಸಿದ್ದು, ಹಿಂದೆ ಜಗಮೋಹನ್ ರೆಡ್ಡಿ ಅವರ ಚಿಕ್ಕಪ್ಪ ಮತ್ತು ಟಿಟಿಡಿ ಮಾಜಿ ಅಧ್ಯಕ್ಷ ಸುಬ್ಬಾ ರೆಡ್ಡಿ ಅವರೇ ಕಲಬೆರಕೆ ನಡೆದಿರುವುದನ್ನು ಒಪ್ಪಿಕೊಂಡಿದ್ದರು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

