ಹಾಸನ: ಮುಂದಿನ ಮಾಘ ಅಥವಾ ಪಾಲ್ಗುಣ ಮಾಸದಲ್ಲಿ ಅಂದರೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗುವ ಯೋಗ ಇದೆ ಎಂದು ಹಾಸನದಲ್ಲಿ ಕೋಡಿ ಮಠದ ಶ್ರೀಗಳು ಭವಿಷ್ಯ ಹೇಳಿದ್ದಾರೆ.
ಜತೆಗೆ ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆ ರಾಜ್ಯ ರಾಜಕಾರಣದ ಕೇಂದ್ರವಾಗಲಿದ್ದು, ಹಾಸನ ಜಿಲ್ಲೆಯಿಂದಲೇ ಒಬ್ಬ ನಾಯಕ ಪ್ರಧಾನಿ ಅಥವಾ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೋಡಿ ಮಠದ ಶ್ರೀಗಳು ಎಲ್ಲರೂ ಅಚ್ಚರಿಪಡುವ ಭವಿಷ್ಯ ನುಡಿದಿದ್ದಾರೆ.
ಒಟ್ಟಾರೆ ಈ ಮೂಲಕ ಮುಂದೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರದ ಉಳಿದ ಅವಧಿಯಲ್ಲಿ ಆಡಳಿತ ನಡೆಸುವುದು ಖಚಿತವಾಗಿದೆ. ಜತೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿಎ ಮುಖ್ಯಮಂತ್ರಿಯಾಗಬಹುದು ಎಂದು ಅಂದಾಜಿಸಲಾಗಿದೆ.

