ಬೆಂಗಳೂರು: ರಾಜಧಾನಿಯಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಇತ್ತೀಚೆಗೆ ಕನಕಪುರ್ಟ ರಸ್ತೆಯ ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಅಂಜನಾಪುರದ ನಾಲ್ಕನೇ ಬ್ಲಾಕ್ನ ಸಂದೀಪ್ ಎಂಬುವವರ ಮನೆಯ ಗೇಟ್ ಬಳಿ ಚಿರತೆ ಬಂದು ಇಂತಿದ್ದು, ಗೊತ್ತಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯವನ್ನು ಕಂಡ ಸ್ಥಳೀಯರು ಭಯಭೀತರಾಗಿದ್ದಾರೆ.
ಫೆ.6ರಂದು ಸಂದೀಪ್ ಮನೆಯ ಗೇಟ್ ಬಳಿ ಕಾಣಿಸಿಕೊಂಡಿದ್ದರೆ, ಮತ್ತೊಂದು ಸಿಸಿಟಿವಿಯಲ್ಲಿ ಫೆ.3 ರಂದು ರಸ್ತೆಯಲ್ಲಿಒ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಾಣಿಸಿಕೊಂಡಿವೆ. ಸಂದೀಪ್ ಮನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ ಬಡಾವಣೆಯ ವಿವಿಧ ಮನೆಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಲ್ಲಿ ಸ್ಥಳೀಯರು ತೊಡಗಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಶೀಘ್ರವೇ ಚಿರತೆಯನ್ನು ಸೆರೆಹಿಡಿಯುವಂತೆ ಮನವಿ ಮಾಡಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

