ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ಆಟೋಗಳನ್ನು ನಿಷೇಧಿಸಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಂಡಿದೆ.
ಮಹದೇಶ್ವರ ಬೆಟ್ಟದ ರಸ್ತೆಗಳು ಕಿರಿದಾಗಿದ್ದು, ಕಾಡಿನ ರಸ್ತೆಯಾಗಿದೆ. ಹೀಗಾಗಿ, ಭಕ್ತರಿಗೆ ತೊಂದರೆಗಳಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಬೈಕ್ ಮತ್ತು ಆಟೋಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಫೆ. 13ರಿಂದ 18ರವರೆಗೆ ನಿಷೇಧ ಜಾರಿಯಲ್ಲಿರಲಿದ್ದು, ಶೀವರಾತ್ರಿಯ ಅಂಗವಾಗಿ ಪಾದಯಾತ್ರೆಯಲ್ಲಿ ಮತ್ತು ವಿವಿಧ ವಾಹನಗಳಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

