ಅಪರಾಧ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲೂ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

Share It

ನವದೆಹಲಿ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲೂ ವಜಾಗೊಂಡಿದ್ದು, ಅವರನ್ನು ಸಿಐಡಿ ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆಯಿದೆ.

ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದರ ವಿರುದ್ಧ ಬೈರತಿ ಬಸವರಾಜ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಯಖು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಸಿದ್ಧತೆ ನಡೆಸಿದೆ.


Share It

You cannot copy content of this page