ಕ್ರೀಡೆ ಸುದ್ದಿ

ಆರ್‌ಸಿಬಿ ಅಭಿಮಾನಿಗಳಿಗೆ ಸಿಗುತ್ತಾ ಗುಡ್ ನ್ಯೂಸ್ : ಚಿನ್ನಸ್ವಾಮಿಯಲ್ಲಿ ಪಂದ್ಯಕ್ಕೆ ಅನುಮತಿ ?

Share It

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲು ಸರಕಾರ ಸಜ್ಜಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ಸರಕಾರ ಅನುಮತಿ ನೀಡುವ ಸಾಧ್ಯತೆಯಿದ

ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡುವ ಕುರಿತು ಚರ್ಚೆ ನಡೆಸಲಾಯಿತು. ಕೆಎಸ್‌ಸಿಎ ಸಮಿತಿ ನಿಗದಿಪಡಿಸಿದ ಕಂಡೀಷನ್‌ಗಳನ್ನು ಪೂರೈಸಿದ್ದು, ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬಹುದು ಎಂಬ ತೀರ್ಮಾನಕ್ಕೆ ಸಮಿತಿ ಬಂದಿದೆ ಎನ್ನಲಾಗಿದೆ.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಜಿಬಿಎ ಅಧಿಕಾರಿಗಳಿಗೆ, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಮತು ಕೆಎಸ್‌ಸಿಎ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ನಂತರ ಸಂಪುಟ ಸಭೆಯ ಮುಂದೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಕುರಿತು ಗೃಹಸಚಿವರು ತಿಳಿಸಿದರು ಎನ್ನಲಾಗಿದೆ.


Share It

You cannot copy content of this page