ಬೆಂಗಳೂರು: ಪರಿಶಿಷ್ಟ ಜಾತಿಯ ಕಾಂಗ್ರೆಸ್ ಶಾಸಕರ ಜತೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದು, ಸಮುದಾಯದ ಶಾಸಕರು ವಿವಿಧ ಬೇಡಿಕೆಗಳನ್ನು ಸಿಎಂ ಮುಂದಿಟ್ಟಿದ್ದಾರೆ.
ಮುಂಬರುವ ಬಜೆಟ್ನಲ್ಲಿ ಇಂಡಸ್ಟ್ರಿಯಲ್ಲಿ ಲ್ಯಾಂಡ್ ಅಲೋಕೇಶನ್, ವಿವಿಗಳಲ್ಲಿ ಹೆಚ್ಚಿನ ನೇಮಕಾತಿಗೆ ಮನವಿ ಮಾಡಲಾಗಿದೆ. ಎರಡೂವರೆ ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬಬೇಕು ಎಂದು ಮನವಿ ಮಾಡಲಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬುವಂತೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಗುತ್ತಿಗೆ ಮೀಸಲಾತಿ ಕುರಿತಂತೆಯೂ ಚರ್ಚೆ ನಡೆದಿದೆ. ಎಸ್ಸಿಪಿ-ಟಿಎಸ್ಪಿ ಹಣ ಉಪಯೋಗ ಮಾಡಿಕೊಳ್ಳುವ ಕುರಿತು ಚರ್ಚೆ ನಡೆದಿದೆ. ಸಮುದಾಯಕ್ಕೆ ನಿಗದಿ ಮಾಡಿದ ಅನುದಾಯ ಸರಿಯಾಗಿ ಬಳಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಗಿದೆ.

