ಅಪರಾಧ ಸುದ್ದಿ

14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

Share It

ಬೆಂಗಳೂರು: ಕಂಪ್ಯೂಟರ್ ಸೈನ್ಸ್‌ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೀತಂ ಯೂನಿವರ್ಸಿಟಿಯಲ್ಲಿ ನಡೆದಿದೆ.

ಸರ್ಜಾಪುರ ಮೂಲದ ನಯನಾ(20) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಯನಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಗೀತಂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್‌ ವ್ಯಾಸಾಂಗ ಮಾಡುತ್ತಿದ್ದರು.

ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Share It

You cannot copy content of this page