ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಣೆ ಮಾಡಿದ್ದು, ಸುಗಮ ಪರೀಕ್ಷೆಗಳನ್ನು ನಡೆಸಲು ಅಗತ್ಯ ಸಿದ್ಧತೆ ನಡೆಸಿದೆ.
ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಬೆಳಗ್ಗೆ 10 ಗಂಟೆಯಿಂದ ಪರೀಕ್ಷೆಗಳ ಆರಂಭವಾಗಲಿದ್ದು, ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಯ ವಿವರಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ಪ್ರವೇಶಪತ್ರದಲ್ಲಿ ನಮೂದಿಸಲಾಗುತ್ತದೆ.
ರಾಜ್ಯಾದ್ಯಂತ 8,12,285 ವಿದ್ಯಾರ್ಥಿಗಳು ಮೊದಲ ಬಾರಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. 62845 ವಿದ್ಯಾರ್ಥಿಗಳು ಈಗಾಗಲೇ ಒಮ್ಮೆ ಪರೀಕ್ಷೆ ಬರೆದು ಅನುತ್ತೀರ್ಣರಾಗಿ ಮರಳಿ ಪರೀಕ್ಷೆ ಬರೆಯುವವರಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ಅದೇ ರೀತಿ ಪಿಯುಸಿ ಪರೀಕ್ಷೆಗಳು ಫೆ. 28ರಿಂದ ಆರಂಭವಾಗಲಿದ್ದು, ಮಾರ್ಚ್ 17ರವರೆಗೆ ನಡೆಯಲಿವೆ. ಅನಂತರ ಮರುದಿನದಿಂದಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

