ರಾಜಕೀಯ ಸುದ್ದಿ

ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಅಂತ ಅಂದುಕೊಂಡರೆ ಸುಳ್ಳು: ರಾಜಣ್ಣ

Share It

ಬೆಂಗಳೂರು: ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಅಂತ ಅಂದುಕೊಂಡರೆ ಸುಳ್ಳು. ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ ಅಂದ್ರೆ ಯಥಾಸ್ಥಿತಿ ಅಂತಲೇ ಅರ್ಥ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಶಾಸಕರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜಣ್ಣ ಅವರು, ಬಜೆಟ್ ಮಂಡಿಸ್ತಾ ಇಲ್ವಾ ಸಿದ್ದರಾಮಯ್ಯ? ಅಂದ್ರೆ ಯಥಾಸ್ಥಿತಿ ಅಂತಲೇ ಅರ್ಥ. ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗತ್ತೆ ಅಂತ ಅಂದುಕೊಂಡರೆ ಸುಳ್ಳು. ಸಿದ್ದರಾಮಯ್ಯ ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ. ಬಜೆಟ್ ಮಂಡಿಸ್ತಿದ್ದಾರೆ ಅಂದ್ರೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತಾಯ್ತಲ್ಲ ಎಂದರು.‌

ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸದುದ್ದೇಶದಿಂದ ಮಾಡುವ ವಿದೇಶ ಪ್ರವಾಸಕ್ಕೆ ಹೋಗಿ ಬರಲಿ. ಅದನ್ನು ತಪ್ಪು ಎನ್ನುವುದು ಸರಿಯಲ್ಲ. ವಿದೇಶದಲ್ಲಿ ನಮಗೆ ಒಳ್ಳೆಯದಾಗುವ ಕೆಲವು ಸಂಗತಿಗಳು ಇರುತ್ತವೆ. ಅದನ್ನು ತಿಳಿದುಕೊಂಡು ಬಂದು ಇಲ್ಲಿ ಅಳವಡಿಸಿಕೊಂಡರೆ ಒಳ್ಳೆಯದೇ ಅಲ್ವಾ? ಪ್ರಪಂಚದ ಯಾವ ಯಾವ ದೇಶಗಳಲ್ಲಿ ರೈತರಿಗೆ ಅನುಕೂಲ ಆಗುವ ಪದ್ದತಿ ಇರುತ್ತದೆಯೋ ಅದನ್ನು ಕಲಿತು ಬರಲಿ. ಯಾಕೆ ಪ್ರವಾಸನ್ನು ತಡೆಯುತ್ತಾರೆ, ಅದು ಸರಿಯಲ್ಲ. ಅದಕ್ಕೆ ಕಠಿಣ ಪದ ಬಳಸಿದರೆ ತಪ್ಪಾಗುತ್ತದೆ ಎಂದರು.

ರಾಜಕಾರಣದಲ್ಲಿ ಎಲ್ಲರೂ ಒಂದೇ ತರಹ ಇರುತ್ತಾರಾ?. ಸಿದ್ದರಾಮಯ್ಯ ಆರು ತಿಂಗಳು ಅವರ ಹತ್ತಿರ ಹೋಗಿಲ್ಲ ಅಂದ್ರೆ ಯಾಕೆ ಬಂದಿಲ್ಲ ಅಂತ ಕೇಳಲ್ಲ. ದಿನಾ ಸಿದ್ದರಾಮಯ್ಯ ಹತ್ತಿರ ಹೋದ್ರೆ ಯಾಕಯ್ಯ ಬಂದೆ ಅಂತ ಕೇಳಲ್ಲ. ನಾವೆಲ್ಲ ಸಿದ್ದರಾಮಯ್ಯ ಬಣ ಅಲ್ವಾ?. ನಾವೆಲ್ಲ ಯಾಕೆ ಫಾರಿನ್ ಹೋಗ್ತಾ ಇಲ್ಲಾ?. ಅಲ್ಲೆಲ್ಲ ಬೈಠಕ್ ಸೇರ್ತಾರೆ ಕೆಲವರು. ಬೈಠಕ್ ಅಂದ್ರೆ ದೇಶದ ಬಗ್ಗೆ ಚಿಂತನೆ ಮಾಡುವುದು ಎಂದರು.


Share It

You cannot copy content of this page