ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯನ್ನು ಪುನಾರಚನೆ ಮಾಡಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪದನಿಮಿತ್ತ ಅಧ್ಯಕ್ಷರಾಗಿದ್ದು, ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.,ಕೆ.ಶಿವಕುಮಾರ್ ಅವರು ಪದನಿಮಿತ್ತ ಉಪಾಧ್ಯಕ್ಷರಾಗಿರುತ್ತಾರೆ. ಅದಲ್ಲದೆ, ಸಮಿತಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ವಿಧಾನಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು ಸದಸ್ಯರಾಗಿರುತ್ತಾರೆ.
ಜತೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ಐದು ವಿವಿಧ ಪ್ರಾಧಿಕಾರಿಗಳ ಆಯುಕ್ತರು, ಐದು ಪಾಲಿಕೆಗಳ ಮೇಯರ್ ಗಳು ಸಮಿತಿಯ ಸದಸ್ಯರಾಗಿರಲಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಮುಖ್ಯ ಅಭಿಯಂತರರು, ಮಹಾಣಗರ ಪ್ರದೇಶಾಭಿವೃದ್ಧಿ ಆಯುಕ್ತರು, ಭೂ ಸಾರಿಗೆ ಪ್ರಾಧಿಕಾರದ ಮುಖ್ಯಕಾರ್ಯನಿರ್ವಹಣಾಧಿಕಾರಿ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಸೇರಿ ಪ್ರಮುಖ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ.

